ಬೆಂಗಳೂರು

ಪ್ರಮುಖ ಸುದ್ದಿಗಳುಬೆಂಗಳೂರು

ಲಾಕ್ ಡೌನ್ ಹಿನ್ನೆಲೆ: ಪೊಲೀಸ್ ಸಬ್ ಇನ್ಸ್ ಪೆಕ್ಟರ್ ನೇಮಕಾತಿ ಸ್ಥಗಿತ

ಬೆಂಗಳೂರು: ಕೊರೋನಾ ವೈರಸ್ ಲಾಕ್ ಡೌನ್ ಹಿನ್ನೆಲೆಯಲ್ಲಿ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಗಳ ನೇಮಕಾತಿ ಮೇಲೆ ಪ್ರತಿಕೂಲ ಪರಿಣಾಮ ಬೀರಿದ್ದು, ನೇಮಕಾತಿ ಪ್ರಕ್ರಿಯೆ ಸ್ಥಗಿತಗೊಳಿಸಲಾಗಿದೆ. ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ 431 ಸಿವಿಲ್ ಪೊಲೀಸ್ ಸಬ್-ಇನ್ಸ್‌ಪೆಕ್ಟರ್ ಗಳು ಮತ್ತು ಕಲ್ಯಾಣ ಕರ್ನಾಟಕ ಭಾಗದ 125 ಪೊಲೀಸ್ ಸಬ್ ಇನ್ಸ್ ಪೆಕ್ಟ್ ರ್ ಗಳ ನೇಮಕಾತಿಗಾಗಿ ಪ್ರಕಟಣೆ ಹೊರಡಿಸಲಾಗಿತ್ತು.ಕೂಡಲೇ ಅರ್ಹ ಅಭ್ಯರ್ಥಿಳಿಂದ ಅರ್ಜಿ ಆಹ್ವಾನಿಸುವುದಾಗಿ ತಿಳಿಸಲಾಗಿತ್ತು. ಇದಕ್ಕಾಗಿ ಎಲ್ಲಾ ರೀತಿಯ ಸಿದ್ದತೆಗಳು ಸಹ ನಡೆಯುತ್ತಿತ್ತು. ಆದರೆ, ಅಂತಿಮವಾಗಿ ಗೃಹ ಸಚಿವಾಲಯ ಶನಿವಾರ ಬರೆದ ಪತ್ರದ ಆಧಾರದ ಮೇಲೆ ನೇಮಕಾತಿ ಪ್ರಕ್ರಿಯೆ ಸ್ಥಗಿತಗೊಳಿಸಲಾಗಿದೆ....
ಪ್ರಮುಖ ಸುದ್ದಿಗಳುಬೆಂಗಳೂರು

ದೇಶದ ಪ್ರಮುಖ ಸ್ವಾಮೀಜಿಗಳ ಜೊತೆ ಆರ್ಎಸ್ಎಸ್ ಮುಖಂಡರ ವಿಡಿಯೋ ಸಂವಾದ

ಬೆಂಗಳೂರು, - ಆರ್ಎಸ್ಎಸ್ ಸರ ಸಂಚಾಲಕರಾದ ಮೋಹನ್ ಭಾಗವತ್ ಮತ್ತು ಸಹ ಕಾರ್ಯವಾಹ ಸುರೇಶ್ ಭಯ್ಯಾಜಿ ಅವರು ಹಿಂದೂ ಧರ್ಮ ಆಚಾರ್ಯ ಮಹಾಸಭಾ ಜೊತೆಯಲ್ಲಿ ಋಷಿ, ಕೃಷಿ ಹಾಗೂ ಕೊರೋನಾ ವೈರಸ್ ಹಿನ್ನೆಲೆಯಲ್ಲಿ ದೇಶದ ಪ್ರಮುಖ ಸ್ವಾಮೀಜಿಗಳ ಜತೆ ವಿಡಿಯೋ ಸಂವಾದ ನಡೆಸಿದರು. ಆದಿಚುಂಚನಗಿರಿ ಮಹಾ ಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಡಾ. ಶ್ರೀ ನಿರ್ಮಲಾನಂದನಾಥ ಮಹಾಸ್ವಾಮೀಜಿ, ಶ್ರೀ ಅವಧೇಶಾನಂದ ಸ್ವಾಮೀಜಿ, ಶ್ರೀ ಪರಮಾನಂದ ಸ್ವಾಮೀಜಿ ಮತ್ತು ಯೋಗ ಗುರು ಶ್ರೀ ಬಾಬಾ ರಾಮï ದೇವ್ ಅವರು ವಿಡಿಯೋ ಸಂವಾದದಲ್ಲಿ ಭಾಗವಹಿಸಿದ್ದರು. ಕೊರೋನಾ ವೈರಾಣುವಿನ ಸೋಂಕು ಹೆಚ್ಚಾಗುತ್ತಿರುವ ಬಗ್ಗೆ ಸಂವಾದ ನಡೆಸಿದ ಸ್ವಾಮೀಜಿಗಳು ಹಾಗೂ ಆರ್ಎಸ್ಎಸ್ ಮುಖಂಡರು, ಈ ರೋಗ ನಿಯಂತ್ರಿಸುವ ಪರಿಹಾರಗಳ ಕುರಿತು ಸಮಾಲೋಚನೆ ನಡೆಸಿದರು. ಕೊರೋನಾ ಹಿನ್ನೆಯಲ್ಲಿ ದೇಶದ ರೈತ ಸಮುದಾಯ ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ವಿಚಾರ ವಿನಿಮಯ ಮಾಡಲಾಯಿತು. ಉತ್ತಮ ಬೆಳೆ ಬೆಳೆದರೂ ಸೂಕ್ತ...
ಪ್ರಮುಖ ಸುದ್ದಿಗಳುಬೆಂಗಳೂರು

ಕರ್ನಾಟಕ ಅನ್ಲಾಕ್ : ನಾಳೆ ರಾಜ್ಯ ಸರ್ಕಾರದಿಂದ ಹೊಸ ಮಾರ್ಗಸೂಚಿ ಪ್ರಕಟ

ಬೆಂಗಳೂರು, ಮೇ 31-ರಾಜ್ಯದಲ್ಲಿ ಲಾಕ್ಡೌನ್ ಇನ್ನಷ್ಟು ಸಡಿಲಿಕೆಯಾಗಿದ್ದು, ದೇವಸ್ಥಾನ, ಮಸೀದಿ, ಚರ್ಚ್, ಹೋಟೆಲ್, ರೆಸ್ಟೋರೆಂಟ್, ಕೈಗಾರಿಕೆ ಸೇರಿದಂತೆ ಮತ್ತಿತರ ಚಟುವಟಿಕೆಗಳಿಗೆ ರಾಜ್ಯ ಸರ್ಕಾರ ಅವಕಾಶ ಕಲ್ಪಿಸಲಿದೆ. ಈ ಸಂಬಂಧ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ನಾಳೆ ಮಹತ್ವದ ಪತ್ರಿಕಾಗೋಷ್ಠಿ ಕರೆದಿದ್ದು, ರಾಜ್ಯ ಸರ್ಕಾರದ ನೂತನ ಮಾರ್ಗಸೂಚಿಗಳನ್ನು ಪ್ರಕಟಿಸಲಿದ್ದಾರೆ. ಈಗಾಗಲೇ ರಾಜ್ಯ ಸರ್ಕಾರ ನಾಳೆಯಿಂದಲೇ ಜಾರಿಯಾಗುವಂತೆ ಮಸೀದಿ, ಚರ್ಚ್, ದೇವಸ್ಥಾನಗಳನ್ನು ತೆಗೆಯಲು ಅನುಮತಿ ನೀಡಿತ್ತು. ಆದರೆ, ನಿನ್ನೆ ಕೇಂದ್ರ ಸರ್ಕಾರ ಬಿಡುಗಡೆ ಮಾಡಿರುವ ನೂತನ ಮಾರ್ಗಸೂಚಿಯಲ್ಲಿ ಜೂ.8ರಿಂದ ದೇವಾಲಯಗಳನ್ನು ಆಯಾ ರಾಜ್ಯಗಳ ಪರಿಸ್ಥಿತಿಗೆ ಅನುಗುಣವಾಗಿ ತೆರೆಯಲು ಅನುಮತಿ ನೀಡಿದೆ. ಹೀಗಾಗಿ ನಾಳಿನ ಪತ್ರಿಕಾಗೋಷ್ಠಿಯಲ್ಲಿ ಯಡಿಯೂರಪ್ಪ ಸರ್ಕಾರದ ಮಾರ್ಗಸೂಚಿಯನ್ನು ಬಿಡುಗಡೆ ಮಾಡಲಿದ್ದು, ಕಳೆದ ಎರಡೂವರೆ ತಿಂಗಳಿನಿಂದ ಮುಚ್ಚಿ ಹೋಗಿರುವ ವಾಣಿಜ್ಯ ಚಟುವಟಿಕೆಗಳಿಗೆ ಅವಕಾಶ ಕಲ್ಪಿಸುವ ಸಾಧ್ಯತೆ ನಿಚ್ಚಳವಾಗಿದೆ. ಈಗಾಗಲೇ ದೇವಸ್ಥಾನ, ಮಸೀದಿ, ಚರ್ಚ್ಗಳಿಗೆ ಮಾರ್ಗಸೂಚಿಗಳನ್ನು ಹೊರಡಿಸಲಾಗಿದೆ. ಈ ಪ್ರಕಾರವಾಗಿ ದೇವಸ್ಥಾನಗಳಲ್ಲಿ ಕಟ್ಟುನಿಟ್ಟಾಗಿ...
ಪ್ರಮುಖ ಸುದ್ದಿಗಳುಬೆಂಗಳೂರು

ಉಪಕರಣಗಳ ಖರೀದಿ ಅವ್ಯವಹಾರದ ಬಗ್ಗೆ ತನಿಖೆಗೆ ಎಚ್.ಕೆ ಪಾಟೀಲ್ ಒತ್ತಾಯ

ಬೆಂಗಳೂರು, ಮೇ 30- ಕರ್ನಾಟಕ ಡ್ರಗ್ಸ ಲಾಜಿಸ್ಟಿಕ್ಸ ಸಂಸ್ಥೆಯಲ್ಲಿ ಕೊರೋನಾ ವೈರಸ್ ಸಂಬಂಧ ಔಷಧ ಮತ್ತು ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರ ಮತ್ತು ಭ್ರಷ್ಠಾಚಾರದ ಬಗ್ಗೆ ದೂರುಗಳು ಬಂದಿರುವ ಹಿನ್ನೆಲೆಯಲ್ಲಿ ಕೋವಿಡï-19 ನಿರ್ವಹಣೆಯ ಕಡತಗಳನ್ನು ಹಾಗೂ ಕಾಗದಗಳನ್ನು ಸುರಕ್ಷತಾ ಸುಪರ್ದಿಗೆ ಒಪ್ಪಿಸಿ ಹಿರಿಯ ಅಧಿಕಾರಿಯೊಬ್ಬರ ನೇರ ಮೇಲ್ವಿಚಾರಣೆಯಲ್ಲಿರಿಸಬೇಕು ಎಂದು ಮಾಜಿ ಸಚಿವ ಹಾಗೂ ಸಾರ್ವಜನಿಕ ಲೆಕ್ಕಪತ್ರ ಸಮಿತಿ ಎಚ್.ಕೆ ಪಾಟೀಲ್ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಈ ಸಂಬಂಧ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಟಿ.ಎಂ.ವಿಜಯ ಭಾಸ್ಕರ್ ಅವರಿಗೆ ಪತ್ರ ಬರೆದಿರುವ ಎಚ್.ಕೆ.ಪಾಟೀಲ್ ಸಾರ್ವಜನಿಕ ಲೆಕ್ಕಪತ್ರ ಸಮಿತಿಗೆ ಸಾಕಷ್ಟು ದೂರುಗಳು ಸ್ವೀಕೃತವಾಗಿವೆ. ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ ಅಧಿನಿಯಮ ಕಲಂ 4 ರನ್ವಯ ನೀಡಿರುವ ವಿನಾಯಿತಿಯನ್ನು ದುರುಪಯೋಗ ಪಡಿಸಿಕೊಂಡು ಸಂಸ್ಥೆಯ ಅಧಿಕಾರಿಗಳು ಹತ್ತಾರು ಕೋಟಿ ರೂ.ಗಳ ಅವ್ಯವಹಾರ ನಡೆಸಿದ್ದು, ಬೊಕ್ಕಸಕ್ಕೆ ನಷ್ಟ ಉಂಟು ಮಾಡಿರುತ್ತಾರೆ ಎಂಬ ಗಂಭೀರ...
ಪ್ರಮುಖ ಸುದ್ದಿಗಳುಬೆಂಗಳೂರು

ಇನ್ನುಮುಂದೆ ಭಾನುವಾರ ಲಾಕ್ಡೌನ್ ಇಲ್ಲ, ಎಂದಿನಂತಿರಲಿದೆ ದೈನಂದಿನ ಚಟುವಟಿಕೆ!

ಬೆಂಗಳೂರು: ರಾಜ್ಯದಲ್ಲಿ ಲಾಕ್ಡೌನ್ ತೆರವುಗೊಳಿಸಿದ ಬಳಿಕ ಪ್ರತಿ ಭಾನುವಾರ ಜಾರಿಗೊಳಿಸಲಾಗಿದ್ದು ಕಂಪ್ಲೀಟ್ ಲಾಕ್ಡೌನ್ಅನ್ನು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ತೆರವುಗೊಳಿಸಿದ್ದಾರೆ. ಸಾರ್ವಜನಿಕರ ಬೇಡಿಕೆ ಹಿನ್ನೆಲೆಯಲ್ಲಿ ಹಾಗೂ ರಾಜ್ಯದ ಜನತೆಯ ಹಿತದೃಷ್ಟಿಯಿಂದ ಈ ನಿರ್ಧಾರ ಕೈಗೊಂಡಿರುವುದಾಗಿ ತಿಳಿಸಿದ್ದಾರೆ. 'ಭಾನುವಾರ ದಿನಾಂಕ 31.05.2020ರಂದು ಕಂಪ್ಲೀಟ್ ಲಾಕ್ಡೌನ್ ಇರುವುದಿಲ್ಲ. ಆದ್ದರಿಂದ ಎಲ್ಲಾ ದೈನಂದಿನ ಚಟುವಟಿಕೆಗಳು ಎಂದಿನಂತೆ ಇರುತ್ತವೆ' ಎಂದು ಸಿಎಂ ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ....
ಪ್ರಮುಖ ಸುದ್ದಿಗಳುಬೆಂಗಳೂರು

ದತ್ತಾತ್ರೇಯ ಪಾಟೀಲ ರೇವೂರ ವಿರುದ್ಧ ಕ್ರಿಮಿನಲ್ ಕೇಸ್ ; ಸಿದ್ದರಾಮಯ್ಯ ಅಗ್ರಹ

ಬೆಂಗಳೂರು, ಮೇ 29- ಗುಲ್ಬರ್ಗಾ ಜಿಲ್ಲೆಯ ಹಿಂದುಳಿದ ವರ್ಗಗಳ ಅಧಿಕಾರಿ ರಮೇಶ್ ಸಂಗ ಅವರೊಂದಿಗೆ ಅನುಚಿತವಾಗಿ ವರ್ತಿಸಿ ಬೆದರಿಕೆ ಹಾಕಿ ಹಣಕ್ಕಾಗಿ ಒತ್ತಾಯಿಸಿರುವ ಬಿಜೆಪಿ ಶಾಸಕ ದತ್ತಾತ್ರೇಯ ಪಾಟೀಲ ರೇವೂರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸುವಂತೆ ಪ್ರತಿ ಪಕ್ಷದ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಸದರಿ ಶಾಸಕರು ಕ್ಷೇತ್ರದ ಜನರಿಗೆ ಆಹಾರದ ಕಿಟ್ ಹಂಚಬೇಕು. ಅದಕ್ಕಾಗಿ ಹಣ ಕೊಡು ಎಂದು ದೂರವಾಣಿಯಲ್ಲಿ ಬೆದರಿಸಿದ್ದಾರೆ. ವರ್ಗಾವಣೆಗಾಗಿ ಹಣ ಕೇಳಿದ್ದಾರೆ. ಇಷ್ಟೇ ಅಲ್ಲದೆ ಅವರ ಬೆಂಬಲಿಗ ಪಾಲಿಕೆಯ ಸದಸ್ಯ ಆದಿಮನಿ ಅಧಿಕಾರಿಯ ಮನೆಗೆ ಹೋಗಿ ಬೆದರಿಕೆ ಹಾಕಿದ್ದಾರೆ. ಇವರ ವಿರುದ್ಧ ಐಪಿಸಿ 353ರ ಅಡಿ ಕ್ರಿಮಿನಲ್ ಕೇಸ್ ದಾಖಲಿಸಬೇಕು. ಕೂಡಲೇ ಇಬ್ಬರನ್ನು ಬಂಧಿಸಬೇಕು ಎಂದು ಒತ್ತಾಯಿಸಿದ್ದಾರೆ. ಶಾಸಕರೇ ಮುಂದೆ ನಿಂತು ಈ ರೀತಿಯ ದುಂಡಾವರ್ತನೆ ಮಾಡುವುದು ಸರಿಯಲ್ಲ. ಅಧಿಕಾರಿಗಳು ಮುಕ್ತ ವಾತಾವರಣದಲ್ಲಿ ಕೆಲಸ ಮಾಡಲು ಭಯ ಪಡುವಂತಾಗುತ್ತದೆ. ಕೂಡಲೇ ಜಿಲ್ಲಾಧಿಕಾರಿಗಳು ಕ್ರಮ...
ಪ್ರಮುಖ ಸುದ್ದಿಗಳುಬೆಂಗಳೂರುಮನರಂಜನೆ

ಅಂಬಿ ಹುಟ್ಟುಹಬ್ಬಕ್ಕೆ ಸಿಎಂ ಸೇರಿ ಗಣ್ಯರ ನಮನ

ಇಂದು ದಿವಂಗತ ನಟ, ರಾಜಕಾರಣಿ ರೆಬೆಲ್ ಸ್ಟಾರ್ ಅಂಬರೀಶ್ ಅವರ 68ನೇ ಜನ್ಮದಿನ. ಕೊರೋನಾ ಲಾಕ್ ಡೌನ್ ಕಾರಣ, ಅವರ ಸಮಾಧಿಯ ಬಳಿಗೆ ತೆರಳಲಾಗದೆ, ಅಭಿಮಾನಿಗಳು ಸರಳವಾಗಿ ಹುಟ್ದಬ್ಬ ಆಚರಿಸುತ್ತಿದ್ದಾರೆ. ಸಾಮಾಜಿಕ ಜಾಲತಾಣದಲ್ಲಂತೂ ಅಭಿಮಾನದ ಮಹಾಪೂರವೇ ಹರಿದು ಬರುತ್ತಿದೆ. ಪತ್ನಿ ಸುಮಲತಾ, “ ನಿಮ್ಮ ನೆನಪೇ ನಿತ್ಯ ಜ್ಯೋತಿ, ನಿಮ್ಮ ಸ್ಮರಣೆಯೇ ಅಮರ ಪ್ರೀತಿ” ಎಂದು ಟ್ವೀಟ್ ಮಾಡಿದ್ದಾರೆ. ಅಷ್ಟೇ ಅಲ್ಲದೆ " ವಿಧಿ ಅವರನ್ನು ನಮ್ಮಿಂದ ಶಾಶ್ವತವಾಗಿ ದೂರ ಮಾಡಿದೆ. ಅವರ ಹೃದಯ ಬ್ರಹ್ಮಾಂಡದಷ್ಟು ವಿಶಾಲವಾಗಿತ್ತು. ಜೀವನದಲ್ಲಿ ಅವರೊಡನೆ ಕೆಲ ಹೆಜ್ಜೆ ಹಾಕಿದ್ದಕ್ಕಾಗಿ ನನಗೆ ಹೆಮ್ಮೆ ಇದೆ" ಎಂದು ಇನ್ನೊಂದು ಟ್ವೀಟ್ ಮಾಡಿ ಹೇಳಿದ್ದಾರೆ. ಸಿಎಂ ಯಡಿಯೂರಪ್ಪ್, ಗಣ್ಯರ ನಮನಮಾಜಿ ಸಚಿವ, ಜನಪ್ರಿಯ ಕಲಾವಿದ, ರೆಬೆಲ್ ಸ್ಟಾರ್ ಅಂಬರೀಶ್ ಅವರ ಜನ್ಮದಿನಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೇರಿ ಅನೇಕ ಗಣ್ಯರು ಗೌರವ ನಮನ ಸಲ್ಲಿಸಿದ್ದಾರೆ. ಮುಖ್ಯಮಂತ್ರಿ ಬಿ.ಎಸ್....
ಪ್ರಮುಖ ಸುದ್ದಿಗಳುಬೆಂಗಳೂರು

ಬೇಲಿಯೇ ಎದ್ದು ಹೊಲ ಮೇಯ್ದಂತೆ ; ಸಿಸಿಬಿ ಲಂಚಕೋರರ ಮತ್ತೊಂದು ಹಗರಣ ಬಯಲು : ಮಾಸ್ಕ್ ಮಾರಾಟಗಾರರಿಂದ 30 ಲಕ್ಷ ರೂ. ವಸೂಲು!

ಬೆಂಗಳೂರು: ಮಾಸ್ಕ್ ಮತ್ತು ಸಿಗರೇಟ್ ವಿತರಕರಿಂದ ಸುಮಾರು 2 ಕೋಟಿ ರೂ. ಸುಲಿಗೆ ಮಾಡಿದ ಆರೋಪದಲ್ಲಿ ಕಾಟನ್ ಪೇಟೆ ಪೊಲೀಸ್ ಠಾಣೆಯಲ್ಲಿ ಎರಡು ಎಫ್ಐಆರ್ಗಳು ದಾಖಲಾಗಿವೆ. ಪ್ರಕರಣಗಳ ತನಿಖೆಯನ್ನು ಪಶ್ಚಿಮ ವಿಭಾಗ ಡಿಸಿಪಿ ರಮೇಶ್ ಬಾನೂತ್ ಅವರಿಗೆ ವಹಿಸಲಾಗಿದೆ. ಮಾಸ್ಕ್ ಮಾರಾಟಗಾರರಿಂದ ಹಣ ಪಡೆದ ಸಂಬಂಧ ಸಿಸಿಬಿಯ ಮತ್ತೊಬ್ಬ ಡಿಸಿಪಿ ಕುಲ್ದೀಪ್ ಜೈನ್ ಅವರು ವಿಚಾರಣೆ ನಡೆಸಿ ಪೊಲೀಸ್ ಆಯುಕ್ತರಿಗೆ ವರದಿ ಸಲ್ಲಿಸಿದ್ದಾರೆ. ವಿಚಾರಣೆ ವೇಳೆ ಹಣ ಪಡೆದಿರುವುದು ಕಂಡು ಬಂದಿದೆ. ಈ ಸಂಬಂಧ ವರದಿಯನ್ನು ಪೊಲೀಸ್ ಮಹಾ ನಿರ್ದೇಶಕರ ಕಚೇರಿಗೆ ಕಳುಹಿಸಲಾಗಿದೆ. ಮಾರ್ಚ್ ಕೊನೆ ವಾರದಲ್ಲಿ ಎಸಿಪಿ ಪ್ರಭು ಶಂಕರ್ ಮತ್ತು ಇನ್ಸ್ಪೆಕ್ಟರ್ ಅಜಯ್ ತಂಡ ಬಾಣಸವಾಡಿ ವ್ಯಾಪ್ತಿಯಲ್ಲಿ ಮಾಸ್ಕ್ ಉತ್ಪಾದನೆ, ಮಾರಾಟ ಮಳಿಗೆ ಮೇಲೆ ದಾಳಿ ನಡೆಸಿತ್ತು. ಈ ವೇಳೆ ಮಳಿಗೆ ಮಾಲೀಕರ ವಿರುದ್ಧ ಕೇಸ್ ದಾಖಲಿಸಿ ಜೈಲಿಗೆ ಕಳುಹಿಸುವ ಬೆದರಿಕೆ ಹಾಕಿ ಒಟ್ಟು...
ಪ್ರಮುಖ ಸುದ್ದಿಗಳುಬೆಂಗಳೂರು

ಇನ್ನು ಮುಂದೆ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಹಾಕದಿದ್ದರೆ 200 ರೂ ದಂಡ

ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೋನಾ ಪೀಡಿತರ ಸಂಖ್ಯೆ ಹೆಚ್ಚಾಗುತ್ತಿದೆ. ಈ ಸಂದರ್ಭದಲ್ಲಿ ವೈಯಕ್ತಿಕ ಕಾಳಜಿ, ಸುರಕ್ಷತೆ ಇಲ್ಲದಿದ್ದರೆ ಅಪಾಯ ಕಟ್ಟಿಟ್ಟ ಬುತ್ತಿ ಸಾರ್ವಜನಿಕರು ಏನೇನು ಕ್ರಮ ಕೈಗೊಳ್ಳಬೇಕು ಎಂದು ಸರ್ಕಾರ ಪ್ರತಿದಿನ ಎಚ್ಚರಿಕೆ ಕೊಡುತ್ತಲೇ ಇದೆ, ಆದರೆ ಇದನ್ನು ಎಷ್ಟು ಮಂದಿ ಪಾಲಿಸುತ್ತಿದ್ದಾರೆ ಎಂಬುದು ಪ್ರಶ್ನೆ. ಸಾರ್ವಜನಿಕವಾಗಿ ಓಡಾಡುವಾಗ ಜನರು ಯಾವ ರೀತಿ ಮುನ್ನೆಚ್ಚರಿಕೆ ವಹಿಸಬೇಕು ಎಂದು ಹೇಳುತ್ತಿದ್ದರೂ ಕೆಲವರು ಮಾತ್ರ ಪಾಲಿಸುತ್ತಾರೆ. ಬಹುತೇಕರು ಉಲ್ಲಂಘಿಸುತ್ತಾರೆ, ಆಗ ಸರ್ಕಾರಕ್ಕಿರುವ ಅಸ್ತ್ರ ದಂಡ ಹಾಕುವುದು. ಕೊರೋನಾ ಪೀಡಿತರ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದು ಕಡ್ಡಾಯ. ಹಾಕದಿದ್ದರೆ ದಂಡ ಎಂಬ ನಿಯಮವನ್ನು ಈಗಾಗಲೇ ಕೆಲವು ರಾಜ್ಯಗಳಲ್ಲಿ ಜಾರಿಗೆ ತರಲಾಗಿದೆ. ಇದೀಗ ಕರ್ನಾಟಕ ಸರ್ಕಾರ ಕೂಡ ಅದೇ ನಿರ್ಧಾರಕ್ಕೆ ಬಂದಿದೆ. ದಂಡ: ಜನತೆಯ ಸುರಕ್ಷತೆಗಾಗಿ ರಾಜ್ಯ ಸರ್ಕಾರ ರೂಪಿಸಿರುವ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಹಾಕಬೇಕು ಎನ್ನುವ ನಿಯಮವನ್ನು ಉಲ್ಲಂಘಿಸಿದವರಿಗೆ 200...
ಪ್ರಮುಖ ಸುದ್ದಿಗಳುಬೆಂಗಳೂರು

ವಿದ್ಯುತ್ ತಿದ್ದುಪಡಿ ಕಾಯ್ದೆಗೆ ಡಿಕೆಶಿ ಕಿಡಿ

ಬೆಂಗಳೂರು, - ವಿದ್ಯುತ್ ತಿದ್ದುಪಡಿ ಕಾಯ್ದೆ ಬಗ್ಗೆ ತೀವ್ರ ಅಸಮಾ ಧಾನ ವ್ಯಕ್ತಪಡಿಸಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು, ಪಕ್ಷದ ಹಿರಿಯ ನಾಯಕರ ಜತೆ ಚರ್ಚೆ ಮಾಡಿ ಮುಂದಿನ ಹೋರಾಟದ ಬಗ್ಗೆ ರೂಪುರೇಷೆ ಗಳನ್ನು ಸಿದ್ದಪಡಿಸುವುದಾಗಿ ಹೇಳಿದರು. ಕೆಪಿಸಿಸಿ ಕಚೇರಿಯಲ್ಲಿಂದು ಪಂಡಿತ್ ಜವಹರಲಾಲ್ ನೆಹರು ಅವರ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿದ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು, ಸರ್ಕಾರ ಮನಸೋಇಚ್ಚೆ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿದೆ. ಅವರು ಮಾಡುವ ಎಲ್ಲಾ ಚಟುವಟಿಕೆಗಳನ್ನು ನಾವು ಗಮನಿಸುತ್ತಿದ್ದೇವೆ. ಯಾವುದಕ್ಕೂ ನಮ್ಮ ಅಭಿಪ್ರಾಯ ಕೇಳಲಿಲ್ಲ. ಏನು ಮಾಡ್ತಾರೋ ಮಾಡಲಿ, ವಿರೋಧ ಪಕ್ಷವಾಗಿ ನಾವೂ ಕೂಡ ಸಭೆ ಮಾಡಿ ಚರ್ಚಿಸುತ್ತೇವೆ. ಮುಂದೆ ಯಾವ ರೀತಿಯ ನಿಲುವು ತಾಳಬೇಕು ಎಂಬುದರ ಬಗ್ಗೆ ಶೀಘ್ರವಾಗಿ ತಿಳಿಸುತ್ತೇವೆ ಎಂದರು. ರಾಜ್ಯದಲ್ಲಿ ದೇವಸ್ಥಾನಗಳನ್ನು ತೆರೆಯುವ ಬಗ್ಗೆ ಸರ್ಕಾರ ನಿರ್ಧಾರ ತೆಗೆದುಕೊಳ್ಳುತ್ತಿದೆ. ಅದರಿಂದಾಗುವ ಪರಿಣಾಮಗಳಿಗೆ ಸರ್ಕಾರವೇ ಜವಾಬ್ದಾರಿಯಾಗಬೇಕು. ಈ ಮೊದಲು ರೈತರು ಹಾಗೂ...
1 2 3
Page 2 of 3
error: Content is protected !!